Breaking News

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿ.ಕೆ.ಶಿವಕುಮಾರ್

Share News

ಬೆಂಗಳೂರು (ಅ.12): ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ ‘ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ’ ನೆರವೇರಿಸಿ ಮಾತನಾಡಿದ ಅವರು ‘ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು’ ಎಂದು ಹೇಳಿದರು.

ಇದನ್ನೂ ಓದಿ: ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ: ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವು

“ನಮ್ಮ ಸಂಸ್ಕೃತಿಯೇ ಈ ದೇಶದ ದೊಡ್ಡ ಆಸ್ತಿ. ದಕ್ಷಿಣ ಕನ್ನಡ ಜಿಲ್ಲೆ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ಕಂಬಳ ಈ ಬಾರಿ ಬೆಂಗಳೂರಿನಲ್ಲಿ ನಡೆಯುವ ಕಾರಣ ಎರಡೂ ಜಿಲ್ಲೆಗಳ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ. ಈ ಅವಕಾಶ ಬಳಸಿಕೊಳ್ಳಿ” ಎಂದು ತಿಳಿಸಿದರು.

ಇದನ್ನೂ ಓದಿ: ಅಪ್ರಾಪ್ತೆ ಬಾಲಕಿ ಮದ್ವೆಯಾಗಿ ಗರ್ಭಿಣಿ; ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ..?

ತುಳು ಕೂಟಕ್ಕೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಗರದ ಅರಮನೆ ಮೈದಾನದಲ್ಲಿ ನವೆಂಬರ್ 24, 25 ಮತ್ತು 26ರಂದು ಕಂಬಳ ನಡೆಯಲಿದೆ. ಅದಕ್ಕಾಗಿ ಕಂಬಳ ಓಟಕ್ಕೆ ಕೆರೆಯನ್ನು ಸಿದ್ಧಪಡಿಸುವ ಕಾರ್ಯ ಆರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ಸದಾನಂದಗೌಡ, ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಶಾಸಕರಾದ ಅಶೋಕ್ ಕುಮಾರ್ ರೈ, ಎನ್‌.ಎ. ಹ್ಯಾರಿಸ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WATCH VIDEO ON YOUTUBE: ನಾಗಬನ ನಮ್ಮ ಪೂರ್ವಜರ ಪರಿಸರ ಸಂರಕ್ಷಣೆಯ ಕಾಳಜಿಯ ನಾಗಬನವಾಗಬೇಕಾಗಿದೆ: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *