Breaking News

ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವು

Share News

ಗದಗ: ಚಲನಚಿತ್ರ ನಟ ಯಶ್ (Yash) ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ (Electrocuted) 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ (Laxmeshwar) ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್​ ಸಂಪೂರ್ಣ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.

ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *