Breaking News

ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ; ಪದ್ಮ ಪ್ರಶಸ್ತಿ ಸಾಧಕರಿಗೆ ಪ್ರಧಾನಿ ಮೋದಿ ಶ್ಲಾಘನೆ

Share News

ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ

ಸಾಮಾಜಿಕ ಜಾಲತಾಣ ಎಕ್ಸ್  ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್


Share News

Leave a Reply

Your email address will not be published. Required fields are marked *