Breaking News

ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ; ಸುಟ್ಟು ಕರಕಲಾದ ಬಿಲ್ಡಿಂಗ್!

Share News

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಐದು ಅಂತಸ್ತಿನ‌ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದೆ.

ಮಧ್ಯರಾತ್ರಿ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಮೂವರು ಭದ್ರತಾ ಸಿಬ್ಬಂದಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಫರ್ನಿಚರ್ ಅಂಗಡಿ, ಕೋಚಿಂಗ್ ಸೆಂಟರ್, ಐಟಿ ಕಂಪನಿ (IT Company) ಸಂಪೂರ್ಣ ಸುಟ್ಟು ಹೋಗಿದೆ.

ಅವಘಡಕ್ಕೆ ನಿಖರ ಕಾರಣ ತಿಳಿದು ಬಾರದೇ ಇದ್ದರೂ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ರಜೆ ಮತ್ತು ರಾತ್ರಿ ಈ ಘಟನೆ ಸಂಭವಿಸಿದ ಕಾರಣ ಹೆಚ್ಚಿನ ಜನ ಕಟ್ಟಡದಲ್ಲಿ ಇರಲಿಲ್ಲ.

ನೆಲ ಹಾಗೂ ಮೊದಲ ಮಹಡಿಯಲ್ಲಿ ಫರ್ನಿಚರ್‌ ಅಂಗಡಿ, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಚಿಂಗ್ ಸೆಂಟರ್, 3 ಮತ್ತು 4ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್ ಹೆಸರಿನ ಸಾಫ್ಟ್‌ವೇರ್ ಕಂಪನಿ ಕಾರ್ಯನಿರ್ವಹಿಸುತ್ತಿತ್ತು.

ಅವಘಡದ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿದೆ.


Share News

Leave a Reply

Your email address will not be published. Required fields are marked *