Breaking News

ನೇಣಿಗೆ ಶರಣಾದ ಪೊಲೀಸ್ ಪೇದೆ!

Share News

ಬಳ್ಳಾರಿ: ನಗರದ ಡಿಎಆರ್ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ನೆರೆಯ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಆನೇಕಲ್ ತಾಂಡಾದ ಪ್ರಕಾಶ್ ನಾಯ್ಕ್ (25) ಮೃತ ದುರ್ದೈವಿ‌. 2021 ನೇ ಬ್ಯಾಂಚ್‍‌ನಲ್ಲಿ ಡಿಎಆರ್ ಪೊಲೀಸ್ ಆಗಿ ನೇಮಕವಾಗಿದ್ದ ಪ್ರಕಾಶ್ ನಾಯ್ಕ್ ನಗರದ ಡಿಎಆರ್ ಹೆಡ್ ಕ್ವಾಟ್ರಸ್ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ: ತುಲಾಭಾರ, ಆಶ್ಲೇಷಾ ಬಲಿ ಪೂಜೆ

ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಂಗಳೂರಿನಲ್ಲಿ ಎರಡು ತಿಂಗಳು ಕಾಲ ನಡೆಯುವ ಡಿ.ಶಾಟ್ ತರಬೇತಿಗೆ (ಭಯೋತ್ಪಾದಕ ನಿಗ್ರಹ ) ತೆರಳುವಂತೆ ಡಿಎಆರ್ ನ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಇದಕ್ಕೆ ಪ್ರಕಾಶ್ ನಾಯ್ಕ ವಿರೋಧ ವ್ಯಕ್ತಪಡಿಸಿದ್ದರು. ಸೋಮವಾರ ರಾತ್ರಿ ಕ್ವಾಟ್ರಸ್ ರೂಮ್ ನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಸುಂಧರಾಗೆ ರಾಜೇಗೆ ಶಾಕ್! ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

2021ನೇ ಸಾಲಿನಲ್ಲಿ ಡಿಎಆರ್ ಪೊಲೀಸ್ ಪೇದೆಯಾಗಿ ನೇಮಕವಾಗಿದ್ದನು. ಈ ಕುರಿತು ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ಸರ್ವರ ಗಮನ ಸೆಳೆದ ತಾಜ್ಮಹಲ್ ಟೀಯ ಸಂಗೀತದ ಬಿಲ್ ಬೋರ್ಡ್!


Share News

Leave a Reply

Your email address will not be published. Required fields are marked *