Breaking News

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು

Share News

ಹುಬ್ಬಳ್ಳಿ: ಎರಡು ಕಾರು (Car) ಮತ್ತು ಲಾರಿ (Lorry) ನಡುವೆ ಸರಣಿ ಅಪಘಾತ (Accident) ನಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ನಡೆದಿದೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್‌ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ

ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ (Hubballi) ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

ಈ ಘಟನೆಯಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮಣಿಕಂಠ (26), ಪವನ (23), ಚಂದನ (31) ಎಂದು ಗುರುತಿಸಲಾಗಿದೆ. ಈ ಮೂವರು ಪರಸ್ಪರ ಗೆಳೆಯರಾಗಿದ್ದು, ಹಾಸನದಿಂದ ಗೋವಾಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೃತಪಟ್ಟ ಮತ್ತೋರ್ವನನ್ನು ಹರೀಶ್ (34) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಿಂದ ಶಿರಡಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *