Breaking News

ಕಲಾಪದೊಳಗೆ ನುಗ್ಗಿದ್ದು ಮೈಸೂರಿನ ಯುವಕ ; ಗಲ್ಲಿಗೇರಿಸಿ ಎಂದ ತಂದೆ..!

Share News

ಮೈಸೂರು.ನವದೆಹಲಿ, (ಡಿಸೆಂಬರ್ 13): ಲೋಕಸಭಾ ಕಲಾಪ ನಡೆಯುತ್ತಿರುವ ವೇಳೆ ಏಕಾಏಕಿ ಇಬ್ಬರು ಯುವರು ನುಗ್ಗಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ಓಡಿ ಹೋಗಿದ್ದಾರೆ. ಸದನದೊಳಗೆ ನುಗ್ಗಿದ ಯುವಕರನ್ನು ಸಾಗರ್ ಹಾಗೂ ಮನೋರಂಜನ್ ಎಂದು ಗುರುತಿಸಲಾಗಿದ್ದು, ಮನೋರಂಜನ್​ ಮೈಸೂರು ಮೂಲದವನು ಎಂದು ತಿಳಿದುಬಂದಿದೆ. ಇನ್ನು ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್​​ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕಾಂತಾರ-1 ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗಿದೆ ಅವಕಾಶ !

ಈ ಬಗ್ಗೆ ಮನೋರಂಜನ್ ಅವರ ತಂದೆ ದೇವರಾಜೇಗೌಡ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ​ಮನೋರಂಜನ್ ಬಿಇ ಮುಗಿಸಿದ್ದ, ನನ್ನ ಮಗನಿಗೆ ಬಿಇ ಸೀಟ್ ಕೊಡಿಸಿದ್ದು ಹೆಚ್.ಡಿ.ದೇವೇಗೌಡರು. ದೆಹಲಿ, ಬೆಂಗಳೂರಿಗೆ ಓಡಾಡುತ್ತಿದ್ದ. ಆದರೆ ಪುತ್ರ ಮನೋರಂಜನ್​ ಎಲ್ಲಿಗೆ ಹೋಗಿದ್ದಾನೆಂದು ಗೊತ್ತಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ನನ್ನ ಪುತ್ರ ಯಾಕೆ ಈ ರೀತಿ ಮಾಡಿದ್ದಾನೆ ಎಂದು ಗೊತ್ತಿಲ್ಲ. ಸಮಾಜದಲ್ಲಿ ಅನ್ಯಾಯ ಮಾಡಿದ್ದಾನೆ ಅಂದ್ರೆ ಅವನು‌ ಮಗನೇ ಅಲ್ಲ. ಆತ ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದರು.

ಇದನ್ನೂ ಓದಿ: ವಿಟ್ಲ :ಈಜಲು ಹೋಗಿದ್ದ ಯುವಕ ಜಾರಿ ಬಿದ್ದು ಮೃತ್ಯು!

ಪ್ರತ್ಯಕ್ಷದರ್ಶಿ ಮೋಹನ್ ದಾನಪ್ಪ ಹೇಳಿದ್ದೇನು?

ಇನ್ನು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಪ್ರತ್ಯಕ್ಷದರ್ಶಿ ಮೋಹನ್ ದಾನಪ್ಪ ಎನ್ನುವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಲೋಕಸಭೆ​ ಕಲಾಪವನ್ನು ನೋಡಲು ನಾವು ಬಂದಿದ್ದೆವು. ನಾವು ಮೊದಲ ಗ್ಯಾಲರಿಯಲ್ಲಿದ್ದೆವು, ಅವನು ಗ್ಯಾಲರಿ 2ರಲ್ಲಿ ಇದ್ದ. ಗ್ಯಾಲರಿಯಿಂದ ಏಕಾಏಕಿ ಸದನಕ್ಕೆ ಜಿಗಿದು ಕಲರ್​​​ ಸ್ಪ್ರೇ ಮಾಡಿದ್ದಾನೆ. ಬಲಗಾಲಿನ ಶೂನಿಂದ ತೆಗೆದು ಹಳದಿ ಕಲರ್​​​​​ ಸ್ಪ್ರೇ ಮಾಡಿದ್ದು, ಆ ವೇಳೆ ಕೆಲ ಸಂಸದರು ಹಿಡಿದಿದ್ದಾರೆ. ನಂತರ ಆರೋಪಿಯನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಯಿತು ಎಂದಿದ್ದಾರೆ.

ಇನ್ನು ಇವರಿಬ್ಬರಲ್ಲಿ ಒಬ್ಬರು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಆಪ್ತ ಕಾರ್ಯದರ್ಶಿಯಿಂದ ಪಾಸ್​ ಪಡೆದುಕೊಂಡು ಸಂಸತ್ತಿನೊಳಗೆ ಬಂದಿದ್ದರು. ಆದ್ರೆ, ಈ ರೀತಿ ಏಕೆ ಮಾಡಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *