Breaking News

ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ

Share News

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire CrackersTragedy) ಗಾಗಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ದರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಮೃತನನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಗುರುವಾರ) ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ: ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವು

ಇನ್ನೇನು ದೀಪಾವಳಿ ಹತ್ತಿರ ಬರುತ್ತಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಹಾಗೂ ಈತನ ಸ್ನೇಹಿತ ಪಟಾಕಿ ಖರೀದಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಸ್ನೇಹಿತ ಪಾರಾಗಿದ್ದಾರೆ. ಆದರೆ ವೆಂಕಟೇಶ್ ಮಾತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದರು.

ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ಗಂಭೀರಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಬಾಡಿ ಬಿಲ್ಡರ್ ಆಗಿದ್ದ ವೆಂಕಟೇಶ್ ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.

WATCH VIDEO ON YOUTUBE: ನಾಗಬನ ನಮ್ಮ ಪೂರ್ವಜರ ಪರಿಸರ ಸಂರಕ್ಷಣೆಯ ಕಾಳಜಿಯ ನಾಗಬನವಾಗಬೇಕಾಗಿದೆ: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *