Breaking News

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ; ಆರೋಪಿಯ ಬಂಧನ!

Share News

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪಿ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಆರೋಪಿಯನ್ನುಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪುಂಜಾಲಕಟ್ಟೆ: ಸರಕಾರಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಉಪಾಯುಕ್ತರಿಗೆ ಆರೋಪಿ ವಿರುದ್ದ ಕ್ರಮ ಕೈಗೊಳ್ಳಲು ದೂರನ್ನು ಸಲ್ಲಿಸಲಾಗಿತ್ತು. ದೂರಿಗೆ ಸ್ಪಂದಿಸಿದ ಪೊಲೀಸ್ ಉಪಾಯುಕ್ತರು, ಪ್ರಕರಣವನ್ನು ಸುರತ್ಕಲ್ ಠಾಣೆಗೆ ವರ್ಗಾಯಿಸಿದ್ದರು. ಆರೋಪಿ ಅನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮೂಲತಃ ಉತ್ತರ ಕನ್ನಡದ ಶಿರಸಿಯವನಾದ ಅನಿಲ್ ಕಳೆದ 12 ವರ್ಷಗಳಿಂದ ಸುರತ್ಕಲ್ ನಲ್ಲಿ ವಾಸಿಸುತ್ತಿದ್ದು ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದಾನೆ.

ಆರೋಪಿ ಸರ್ಕಾರದ ಯೋಜನೆಗಳನ್ನು ಪಡೆಯಲು ಕಳೆದ ಮೂರು ತಿಂಗಳಿನಿಂದ ರೇಶನ್ ಕಾರ್ಡಿನಲ್ಲಿ ಹೆಸರು ಸೇರಿಸಲು ಪ್ರಯತ್ನಿಸುತ್ತಿದ್ದ, ಆದರೆ ಸರ್ವರ್ ಸಮಸ್ಯೆಯಿಂದ ವಿಫಲವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಆತನ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವನ್ನು ಅಶ್ಲೀಲ ಪದಗಳಿಂದ ಬೈದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದು, ಪ್ರಸ್ತುತ ಬಂಧನದಲ್ಲಿದ್ದಾನೆ.

ಇದನ್ನೂ ಓದಿ: ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮಹತ್ವದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ


Share News

Leave a Reply

Your email address will not be published. Required fields are marked *