Breaking News

ಬಸ್ ಮತ್ತು ಕಾರಿನ ನಡುವೆ ಅಪಘಾತ ; ಐವರು ಮೃತ್ಯು!

Share News

ಕಾರವಾರ ಡಿಸೆಂಬರ್ 08 : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.

ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ!

ಕಾರಿನಲ್ಲಿದ್ದವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಇದನ್ನೂ ಓದಿ: ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *