Breaking News

ಮದ್ಯರಾತ್ರಿ ಬಸ್‌, ಟ್ರಕ್‌ ನಡುವೆ ಅಪಘಾತ, 12 ಮಂದಿ ಸಜೀವ ದಹನ

Share News

ಮಧ್ಯಪ್ರದೇಶ, ಡಿಸೆಂಬರ್ 28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.

ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 16 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಗುಣ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!

 


Share News

Leave a Reply

Your email address will not be published. Required fields are marked *