Breaking News

ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಇಲೆಕ್ಟ್ರೀಕ್ ಕಾರು ; ವಿಡಿಯೊ ವೈರಲ್

Share News

ಬೆಂಗಳೂರು, ಅಕ್ಟೋಬರ್​ 02: ಆಕಸ್ಮಿಕವಾಗಿ ಎಲೆಕ್ಟ್ರಿಕ್ ​ಕಾರಿಗೆ (Electric car) ಬೆಂಕಿ ಹೊತ್ತಿ ಸುಟ್ಟು ಭಸ್ಮವಾಗಿರುವಂತಹ ಘಟನೆ ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ವತಃ ಕಾರು ಮಾಲೀಕರೇ ಚಾಲಾಯಿಸುತ್ತಿದ್ದು, ಈ ವೇಳೆ ಬಾನೆಟ್​ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾರೆ. ನೋಡ ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕಾರು ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ ಎಂದು ಪುಟ್ಟೇನಹಳ್ಳಿ ಪೊಲೀಸ್​ ರಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋವನ್ನು ಸಾರ್ವಜನಿಕರು ತಮ್ಮ ಮೊಬೈಲ್​ಗಳಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ರಾಕೇಶ್​ ಪ್ರಕಾಶ್​ ಎನ್ನುವವರು ತಮ್ಮ ಎಕ್ಸ್​ನಲ್ಲಿ ಈ ಕುರಿತಾಗಿ ವಿಡಿಯೋವನ್ನು ಹಂಚಿಕೊಂಡಿದ್ದು, ಬೆಂಗಳೂರಿನ ಜೆಪಿ ನಗರದ ದಾಲ್ಮಿಯಾ ವೃತ್ತದ ಬಳಿ ಎಲೆಕ್ಟ್ರಾನಿಕ್​ ಕಾರಿಗೆ ಬೆಂಕಿಗೆ ಆಹುತಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಬರೆದುಕೊಂಡಿದ್ದಾರೆ.

ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಇವಿಯ ನಿರ್ದಿಷ್ಟ ತಯಾರಿಕಾ ಮತ್ತು ಮಾದರಿ ಯಾವುದು ಎಂಬುವುದು ಸ್ಪಷ್ಟವಾಗಿ ಗುರುತಿಸಲಾಗಿಲ್ಲವಾದರೂ, ಇದು ನೆಟ್ಟಿಗರಲ್ಲಿ ಊಹಾಪೋಹ ಮತ್ತು ಚರ್ಚೆಗೆ ಕಾರಣವಾಗಿದೆ. ಬಹುಶಃ ಇದು ಹಳೆಯ ಮಹೀಂದ್ರಾ ಇವಿ ಇ 20 ಆಗಿರಬಹುದು ಎಂದು ಕೆಲವರು ಸೂಚಿಸಿದ್ದಾರೆ. ಆದಾಗ್ಯೂ, ಅಧಿಕಾರಿಗಳು ಅಥವಾ ವಾಹನ ತಯಾರಕರಿಂದ ಅಧಿಕೃತ ಮಾಹಿತಿ ಇಲ್ಲ.

ಕಳೆದ ತಿಂಗಳು ಚೆನ್ನೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್ ಬಸ್ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೂನಮಲ್ಲಿ ಬಳಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿತ್ತು. ವಾಹನದಿಂದ ಹೊಗೆ ಬರುತ್ತಿರುವ ಬಗ್ಗೆ ಬಸ್ ನಿರ್ವಾಹಕರು ಎಚ್ಚರಿಸಿದ ನಂತರ ಬಸ್ಸಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್​ ಪಾರಾಗಿದ್ದರು. ಈ ಬಸ್ ಅನ್ನು ಗ್ರೀನ್ ಸೆಲ್ ಮೊಬಿಲಿಟಿ ತಯಾರಿಸಲಾಗಿತ್ತು.

ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ; ಕುಕಿ ಸಮುದಾಯದ ನಾಲ್ವರ ಬಂಧನ

ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಮಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ (CBI) ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ.ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. ವಶಕ್ಕೆ ಪಡೆಯಲಾಗಿರುವ ಇಬ್ಬರು ಹುಡುಗಿಯರು ಎನ್ನಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.

ಬಂಧಿತ ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್‌ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ.

ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಚುರಚಂದ್‌ಪುರದಲ್ಲಿ ಸೆರೆಹಿಡಿಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಣಿಪುರ ಸಿಎಂ ಬಿರೇನ್​ ಸಿಂಗ್ ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್‌ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ. ಅಪರಾಧದ ನಂತರ ಆರೋಪಿ ಪರಾರಿಯಾಗಬಹುದು. ಆದರೆ, ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಐಆರಿಂದಲೂ ಸಾಧ್ಯವಿಲ್ಲ. ಬಂಧಿತ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಣಿಪುರ ಸಿಎಂ ಬಿರೇನ್​ ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.


Share News

Leave a Reply

Your email address will not be published. Required fields are marked *