Breaking News

ಆನೇಕಲ್‌: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ

Share News

ಆನೇಕಲ್: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ (Under Construction Of School Building) ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಸೆಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ (labours) ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಗಾಯಗೊಂಡ ಕಾರ್ಮಿಕರು ಕೋಲ್ಕತ್ತಾ ಮೂಲದವರು. ಒಟ್ಟು ನೂರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದೆವು. 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಈ ಸಮಯದಲ್ಲಿ ಭಾರ ಹೆಚ್ಚಾಗಿ ಹೆಚ್ಚಾಗಿ ಸಿಮೆಂಟ್ ಹಾಗೂ ಕಬ್ಬಿಣ ಕುಸಿದಿದೆ. ಸ್ಥಳದಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 5 ಮಂದಿ ಸ್ಥತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: SSLC, PUC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ


Share News

Leave a Reply

Your email address will not be published. Required fields are marked *