Breaking News

ಬಾಗಲಕೋಟೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

Share News

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.

ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್


Share News

Leave a Reply

Your email address will not be published. Required fields are marked *