Breaking News

ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸ ವ

Share News

ಬೆಂಗಳೂರು: ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು (Bengaluru International Film Festival) ಆಯೋಜಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..!

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶಿಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಸಂಘಟನಾ ಸಮಿತಿ ಸಭೆಯ ಜತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತಾರಾಷ್ಟ್ರಿಯ ಚಲನಚಿತ್ರೋತ್ಸವ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತಾರಾಷ್ಟ್ರಿಯ ಚಲನಚಿತ್ರೋತ್ಸವ ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ ; ಮದ್ಯದ ದರ ಏರಿಕೆ.!


Share News

Leave a Reply

Your email address will not be published. Required fields are marked *