Breaking News

ಬಂಟ್ವಾಳ: ವಗ್ಗ ಸಮೀಪದ ಮೇನಾಡುವಿನಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ದರೋಡೆಗೈದ 7 ಮಂದಿ ಆರೋಪಿಗಳ ಬಂಧನ

Share News

ಬಂಟ್ವಾಳ, ಜ 22: ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದ ನಿವಾಸಿ ಪ್ರಸ್ತುತ ಚಿಕ್ಕಮಗಳೂರಿನ ಗೌರಿ ಕಾಲುವೆಯಲ್ಲಿ ವಾಸವಾಗಿದ್ದ ಮಹಮ್ಮದ್ ಹನೀಫ್ (49) ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು


Share News

Leave a Reply

Your email address will not be published. Required fields are marked *