Breaking News

ಬಂಟ್ವಾಳ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Share News

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ‌‌ ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಘಟನೆಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *