Breaking News

ಬಂಟ್ವಾಳ: ಪತ್ನಿಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪತಿ; ದೂರು ದಾಖಲು

Share News

ಬಂಟ್ವಾಳ, ಜ 13:ಹೆಂಡತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತಿ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಘಟನೆಯ ಕುರಿತು ಪುದು ಗ್ರಾಮ ನಿವಾಸಿ ಬಿ.ಬಿ.ಫಾತಿಮಾ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌, ಮೊಹಮ್ಮದ್‌, ಸಂಬಂಧಿಕರಾದ ದುಲೇಕಾ, ಆಸ್ಮಾ, ಅರ್ಷಿದಾ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಸಾಸ್ ಕೇಳಿದ್ದಕ್ಕೆ‌ ಮುಖಕ್ಕೆ ಚಾಕುವಿನಿಂದ ಇರಿದ!!

ಫಾತಿಮಾ ನೀಡಿದ ದೂರಿನಲ್ಲಿ ವಿವರಿಸಿದಂತೆ, ಸುಮಾರು 14 ವರ್ಷಗಳ ಹಿಂದೆ ಆಕೆಗೆ ಉಮ್ಮರ್‌ ಫಾರೂಕ್‌ ಜತೆ ವಿವಾಹವಾಗಿದ್ದು, ಈ ವೇಳೆ 5 ಲಕ್ಷ ರೂ. ಹಾಗೂ 63 ಪವನ್‌ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ನೀಡಿದ್ದರು. ಬಳಿಕ ಆರೋಪಿ ಪತಿ ಹೆಚ್ಚಿನ ಹಣ ತರುವಂತೆ ಪತ್ನಿಗೆ ಕಿರುಕುಳದ ಜತೆಗೆ ಹಲ್ಲೆಯನ್ನೂ ಮಾಡುತ್ತಿದ್ದನು. ಆತನ ಸಹೋದರರು, ಅವರ ಪತ್ನಿಯರು ಕೂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಫಾತಿಮಾ ನಂದಾವರದಲ್ಲಿ ಫ್ಲಾಟ್‌ ಖರೀದಿಸಿ ವಾಸವಾಗಿದ್ದರು. ಆರೋಪಿ ಪತಿಯು ಡಿ. 30ರಂದು ಆಕೆಯ ಫ್ಲಾಟ್‌ಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ರಕ್ತ ಬರುವಂತೆ ಹೊಡೆದು ನೀನು ಬೇಡ, ಬೇರೆ ಮದುವೆಯಾಗುವುದಾಗಿ ಹೇಳಿ ಹೋಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *