Breaking News

ಬಂಟ್ವಾಳ : ಒಂದೇ ತರಗತಿಯಲ್ಲಿ ಕಲಿಯುತ್ತಿರವ ಅವಳಿ ಜವಳಿಯ 5 ಜೋಡಿ ವಿದ್ಯಾರ್ಥಿಗಳು!

Share News

ಬಂಟ್ವಾಳ : ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ. ಸಹಪಾಠಿಗಳಂತೂ ಪುಲ್ ಕನ್ ಪ್ಯೂಶನ್ ಆಗಿಬಿಟ್ಟಿದ್ದಾರೆ.

ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು!

ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, ಐದು ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದಾರೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರ ಬಂಧನ!

ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ.

ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪಾರಿವಾಳವನ್ನು ರಕ್ಷಿಸಲು ಹೋದ ಯುವಕರು ತೊಂದರೆಗೆ ಒಳಗಾದ ಮಂಗಳೂರಿನ ವಿಡಿಯೋ!


Share News

Leave a Reply

Your email address will not be published. Required fields are marked *