Breaking News

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ…!

Share News

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ.

ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ

ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣ ಮಳೆಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಪುತ್ತೂರು: ಮೈ ಮೇಲೆ ಪ್ರೇತ ಬರುತ್ತೆ ಎಂದು ಪತ್ನಿಯನ್ನು 3 ತಿಂಗಳಿಂದ ಕೊಠಡಿಯಲ್ಲಿ ದಿಗ್ಬಂಧನ ಮಾಡಿದ ಪತಿ

ದಕ್ಷಿಣ ಕನ್ನಡ ಅಲ್ಲದೆ , ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದ ಹಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *