Breaking News

ಬೆಂಗಳೂರಲ್ಲಿ 12 ಪಬ್ ಬಾರ್ ಗಳಿಗೆ ಬೀಗ ಜಡಿದ ಬಿಬಿಎಂಪಿ!

Share News

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿರುವ ವಲಯವಾರು ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು. ನಿಯಮ ಪಾಲಿಸದ 12 ಪಬ್‌, ಬಾರ್‌ಗಳಿಗೆ ಬೀಗ ಜಡಿದರು.

ಇದನ್ನೂ ಓದಿ: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್…!

ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಯಿತು. ನ್ಯೂನತೆಗಳು ಕಂಡುಬಂದಿರುವ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ.

ಇದನ್ನೂ ಓದಿ: 14 ಸಾವಿರ ಉದ್ಯೋಗಿಗಳನ್ನು ವಜಾ ಗೊಳಿಸಿದ ನೋಕಿಯಾ!

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ‌ ಇಂದು 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, 12 ಉದ್ದಿಮೆಗಳನ್ನು ಮುಚ್ಚಲಾಗಿದೆ.

ದಕ್ಷಿಣ, ಪಶ್ಚಿಮ, ಪೂರ್ವ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿ ವಲಯದ ಪಬ್‌, ಬಾರ್‌, ರೆಸ್ಟೋರೆಂಟ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.

WATCH VIDEO ON YOUTUBE: ಪಕ್ಷಿಗಳ ಅದ್ಭುತವಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ!


Share News

Leave a Reply

Your email address will not be published. Required fields are marked *