Breaking News

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

Share News

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ . ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಜ್ಪೆ : ಮುಸ್ಲಿಂ ಯುವಕನ ಮೈ ಮೇಲೆ ಬಂದ ದೈವ; 18 ವರ್ಷದ ಬಳಿಕ ನೇಮೋತ್ಸವಕ್ಕೆ ಮುಂದಾದ ಗ್ರಾಮಸ್ಥರು..!

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಾಲಬಾಧೆಗೆ ಮನನೊಂದು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರಿವಾಳವನ್ನು ರಕ್ಷಿಸಲು ಹೋದ ಯುವಕರು ತೊಂದರೆಗೆ ಒಳಗಾದ ಮಂಗಳೂರಿನ ವಿಡಿಯೋ!


Share News

Leave a Reply

Your email address will not be published. Required fields are marked *