Breaking News

ಬೆಂಗಳೂರು: ವಿದ್ಯುತ್ ತಂತಿ ತಗುಲಿ ಮೃತಪಟ್ಟ 10 ವರ್ಷದ ಬಾಲಕಿ

Share News

ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್‌ ತಂತಿ (Electricity Wire) ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಮದ್ಯರಾತ್ರಿ ಬಸ್‌, ಟ್ರಕ್‌ ನಡುವೆ ಅಪಘಾತ, 12 ಮಂದಿ ಸಜೀವ ದಹನ

ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ (Apartment) ಘಟನೆ ನಡೆದಿದೆ. ವಿದ್ಯುತ್‌ ಶಾಕ್‌ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ (Hospital) ಮೃತಪಟ್ಟಿದ್ದಾಳೆ. ಸದ್ಯ ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ…!

ಮಧ್ಯರಾತ್ರಿಯೇ ರೊಚ್ಚಿಗೆದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಪಾರ್ಟ್ಮೆಂಟ್‌ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ 100ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯುತ್ ಪೂರೈಕೆ, ವಿದ್ಯುತ್‌ ಕಂಬಗಳ ನಿರ್ವಹಣೆ ನೋಡಿಕೊಳ್ತಿದ್ದ ಪಿಪಿಎಂಎಸ್ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *