Breaking News

ಬೆಂಗಳೂರು: ಅಪಾರ್ಟ್ಮೆಂಟ್‌ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

Share News

ಬೆಂಗಳೂರು, ಡಿ 30 : ಯುವಕನೋರ್ವ ಆಯತಪ್ಪಿ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ

ದಿಪಾಂಶು ಶರ್ಮಾ ತನ್ನ ಸ್ನೇಹಿತರೊಂದಿಗೆ ಅಪಾರ್ಟ್ ಮೆಂಟ್ ಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ಸಿಗರೇಟ್ ಸೇದಲೆಂದು ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ ಅಚಾನಕ್ ಆಗಿ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ

ಇನ್ನು ಈ ಬಗ್ಗೆ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *