Breaking News

ಬೆಂಗಳೂರು ಕಂಬಳ :150ಕ್ಕೂ ಅಧಿಕ ಕೋಣಗಳ ನೋಂದಣಿ; ಬೆಂಗಳೂರು ಕಂಬಳ ನಮ್ಮ ಕಂಬಳ’ ಥೀಮ್ ಸಾಂಗ್ ಬಿಡುಗಡೆ!

Share News

ದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Kambala) ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ಈ ಬಾರಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ(Aishwarya Rai), ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸಿಸಿಬಿ ಪೊಲೀಸರ ದಾಳಿ ;ಮೂವರು ಗಾಂಜಾ ಪೆಡ್ಲರ್ಸ್ ಗಳ ಬಂಧನ!

ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.

ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ: ಕಡಬ : ಕಾಡಾನೆ ದಾಳಿಗೆ ಓರ್ವ ಬಲಿ!

ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ. ಇನ್ನೂ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

WATCH VIDEO ON YOUTUBE:ಶುದ್ಧ ಗಾಣದ ಎಣ್ಣೆ ತೆಗೆಯುವ ಕಟಪಾಡಿಯ ಮಿಲ್!


Share News

Leave a Reply

Your email address will not be published. Required fields are marked *