Breaking News

ಬೆಂಗಳೂರು : ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ ; ವ್ಯಕ್ತಿ ವಿರುದ್ಧ FIR ದಾಖಲು!

Share News

ನಗರದ ಲುಲು ಮಾಲ್​ನಲ್ಲಿ  ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ​ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲ (sexual abuse)ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್​ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಇದರ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿರುವ ವಿಚಾರ ಟಿವಿಗಳ ಮೂಲಕ ಗೊತ್ತಾಗಿ ಲುಲು ಮಾಲ್​ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.


Share News

Leave a Reply

Your email address will not be published. Required fields are marked *