Breaking News

ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ..!

Share News

ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ ಸಂದರ್ಭದಲ್ಲಿ ದಾಳಿ ಮಾಡಿ ಪುರಾವೆ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.

ಇದನ್ನೂ ಓದಿ: ಭಾರತ ಮೂಲದ ವಿದ್ಯಾರ್ಥಿಯನ್ನು ಅಮೇರಿಕದಲ್ಲಿ ಗುಂಡಿಟ್ಟು ಹತ್ಯೆ!

‘ವಿದ್ಯುತ್ ಗುತ್ತಿಗೆದಾರ ಬಿ.ಎನ್. ಪ್ರತಾಪ್ ಅವರು ವಿದ್ಯುತ್ ಸಂಪರ್ಕವೊಂದನ್ನು ವಾಣಿಜ್ಯ ಬಳಕೆಯಿಂದ ಕೈಗಾರಿಕೆ ಬಳಕೆಗೆ ಬದಲಾವಣೆ ಮಾಡಲು ಕೋರಿದ್ದರು. ನಾಗರಾಜ್, ಲಂಚಕ್ಕೆ ಬೇಡಿಕೆ ಇರಿಸಿದ್ದರು. ಬೇಸತ್ತ ಪ್ರತಾಪ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರನ್ವಯ ನಾಗರಾಜ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಹೇಳಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ : ಬೈಕ್ ಸ್ಟ್ಯಾಂಡ್ ನಿಂದ ಅಪಘಾತ ; ವಿದ್ಯಾರ್ಥಿ ಸಾವು!

ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ​​ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿತ್ತು.

WATCH VIDEO ON YOUTUBE: ಹುಟ್ಟಿ ಹರಿಯುವ ಪ್ರದೇಶದಿಂದ ಸಮುದ್ರ ಸೇರುವ ತನಕದ ಕಾವೇರಿ ನದಿಯ ಅದ್ಭುತ ದೃಶ್ಯ!


Share News

Leave a Reply

Your email address will not be published. Required fields are marked *