Breaking News

ನೇತ್ರಾವತಿ ಸೇತುವೆಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸ್ಥಳದಲ್ಲೇ ಸಾವು

Share News

ಮಂಗಳೂರು ಜನವರಿ 24: ಬೈಕ್ ಸ್ಕಿಡ್ ಆಗಿ ರಸ್ತೆ ಡಿವೈಡರ್ ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಾವರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬಾಗಲಕೋಟೆ ಜಿಲ್ಲೆಯ ಸುರೇಶ್ (30) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ವಗ್ಗ ಸಮೀಪದ ಮೇನಾಡುವಿನಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ದರೋಡೆಗೈದ 7 ಮಂದಿ ಆರೋಪಿಗಳ ಬಂಧನ


Share News

Leave a Reply

Your email address will not be published. Required fields are marked *