Breaking News

ಕಾರು – ಲಾರಿ ಅಪಘಾತ; ಚಾಲಕ ಗಂಭೀರ

Share News

ಸುಳ್ಯ, ಡಿ 7: ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಡಿ.6ರಂದು ಸಂಜೆ ಸಂಭವಿಸಿದೆ.

ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ

ಕಲ್ಲುಗುಂಡಿಯ ಶಿವಪ್ಪ ಬೊಳುಗಲ್ಲು ಎಂಬವರು ತನ್ನ ಕಾರಿನಲ್ಲಿ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗೂನಡ್ಕದಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಚಾಲಕ ಶಿವಪ್ಪ ಅವರು ಗಾಯಗೊಂಡರೆನ್ನಲಾಗಿದೆ.

ಇದನ್ನೂ ಓದಿ: ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

ತಕ್ಷಣ ಅವರನ್ನು ಸ್ಥಳೀಯರು ಕಾರಿನಿಂದ ಹೊರಗೆಳೆದು ಸುಳ್ಯ ಆಸ್ಪತ್ರೆಗೆ ಕರೆತಂದು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *