Breaking News

ಚೈತ್ರಾ ಹೇಳಿದಂತೆ ಕೇಳಿದ್ದೀನಿ – ತಪ್ಪೊಪ್ಪಿಕೊಂಡ ಹಾಲಶ್ರೀ

Share News

ಬೆಂಗಳೂರು: ಚೈತ್ರಾ (Chaitra Kundapura) ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ವಶಕ್ಕೆ ಪಡೆಯಲು ಕೋಟ ಠಾಣೆಯಿಂದ ನ್ಯಾಯಾಲಯಕ್ಕೆ ಅರ್ಜಿ!

ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ (Govind Babu Poojari) ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ (BJP MLA Ticket Scam) ಹಣ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೆ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ ಮಠದಲ್ಲಿದೆ ಅಂತ ಸ್ವಾಮೀಜಿ ಅಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ, ಚೈತ್ರಾ ಹೇಳಿದಂತೆ ಕೇಳಿದ್ದೀನಿ. ತಪ್ಪಿಗೆ ನಾನೇ ಹೊಣೆಯಾಗಿದ್ದು, ಬೇರೆ ಯಾರೂ ಈ ಕೇಸ್ ನಲ್ಲಿ ಇಲ್ಲ ಅಂತಾ ಅಭಿನವ ಹಾಲಶ್ರೀ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಹಂದಿ ಮಾಂಸ ತಿಂದ ಟಿಕ್‌ ಟಾಕ್‌ ಸ್ಟಾರ್‌ ಲೀನಾ ಮುಖರ್ಜಿಗೆ 2 ವರ್ಷ ಜೈಲು!

ಈ ನಡುವೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.

ವಿಶಾಲವಾದ ಅರಣ್ಯದ ನಡುವೆ ತುತ್ತ ತುದಿಯಲ್ಲಿರುವ ಗಣೇಶನ ಮೂರ್ತಿ!


Share News

Leave a Reply

Your email address will not be published. Required fields are marked *