Breaking News

ಚೈತ್ರಾ ಕುಂದಾಪುರ ಅರೆಸ್ಟ್; ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ!

Share News

ಉಡುಪಿ: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ರಸ್ತೆಯಲ್ಲೇ ನೀರಿನಂತೆ ಹರಿದು ಹೋದ ರೆಡ್ ವೈನ್ ; ವಿಡಿಯೋ ವೈರಲ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ನಿಷೇಧಿತ MDMA ಡ್ರಗ್ಸ್ ಮಾರಾಟ ಮಾಡ್ತಿದ್ದ ವ್ಯಕ್ತಿ ಸೆರೆ!

ದಕ್ಷಿಣ ಕನ್ನಡ, ಸೆ.12: ರಾಜ್ಯದ್ಯಾಂತ ಮಾದಕ ವಸ್ತು ನಿಷೇಧಕ್ಕೆ ಪೊಲೀಸ್​ ಇಲಾಖೆ ಟೊಂಕ ಕಟ್ಟಿ ನಿಂತಂತೆ ಕಾಣುತ್ತಿದೆ. ಹೌದು, ಇತ್ತೀಚೆಗಷ್ಟೇ ಮಂಗಳೂರಿನಲ್ಲಿ (Mangalore) ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಸಿಸಿಬಿ ಪೊಲೀಸರ (CCB Police) ಬಲೆಗೆ ನಿಷೇಧಿತ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಉಳ್ಳಾಲ ತಾಲೂಕಿನ ಒಂಬತ್ತು ಕೆರೆ ಮನೆ ನಿವಾಸಿ ಅಬ್ದುಲ್ ಸವಾಜ್(30) ಬಂಧಿತ ಆರೋಪಿ.ಇತ ಮಂಗಳೂರು ನಗರದ ಉಳ್ಳಾಲ ಒಂಬತ್ತು ಕೆರೆ ಪರಿಸರದಲ್ಲಿ ಮಾರಾಟಕ್ಕೆ ಯತ್ನಿಸಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಆರೋಪಿ ಸಮೇತ 2 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ MDMA ಅನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಕೃತ್ಯಕ್ಕೆ ಬಳಸಿದ ಸ್ಕೂಟರ್, ನಗದು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ಜಫ್ತಿ ಮಾಡಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 02 ರಂದು ನಿಷೇಧಿತ MDMA ಮಾರಾಟ ಜಾಲದ ಪ್ರಮುಖ ಡ್ರಗ್ ಪೆಡ್ಲರ್​ನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಸೆರೆ ಹಿಡಿಯಲಾಗಿತ್ತು. ನೈಜೀರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಬಂಧಿತ ಮಹಿಳೆ. ಇನ್ನು ಇತ್ತಿಚೇಗಷ್ಟೇ ಮಂಗಳೂರು ಸಿಸಿಬಿ ಪೊಲೀಸರು ಲಕ್ಷಾಂತರ ಮೌಲ್ಯದ MDMA ಮಾರಾಟ ಜಾಲ ಭೇದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಈ ಮಹಿಳೆಯೇ ಡ್ರಗ್ಸ್​ ಮಾರಾಟ ಮಾಡಿದ್ದಳು ಎನ್ನುವುದು ಬೆಳಕಿಗೆ ಬಂದಿತ್ತು.

ಅಂತರ್ ರಾಜ್ಯ ಗಾಂಜಾ ಮಾರಾಟಗಾರನ ಬಂಧನ

ಆನೇಕಲ್: ಅಂತರ್ ರಾಜ್ಯ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅತ್ತಿಬೆಲೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಗೆಸ್ಟ್ ಲೈನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ, ಬಿಹಾರ ಮೂಲದ ಪಿಂಟು ಯಾದವ್​ನನ್ನು ಬಂಧಿಸಲಾಗಿದೆ. ಆರೋಪಿಯಿಂದ ಐದು ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದು, ಜೈಲಿಗೆ ಕಳುಹಿಸಲಾಗಿದೆ. ಇನ್ನು ಇತ ಬಿಹಾರದಿಂದ ರೈಲಿನ ಮೂಲಕ ಗಾಂಜಾ ತಂದು, ಮಾರಾಟ ಮಾಡುತ್ತಿದ್ದ ಎಂದು ಬೆಳಕಿಗೆ ಬಂದಿದೆ.


Share News

Leave a Reply

Your email address will not be published. Required fields are marked *