Breaking News

ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ!

Share News

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ಬಂದ್ ಬಿಸಿ ; BMTC ಬಸ್ ನಲ್ಲಿ ಪ್ರಯಾಣ ಮಾಡಿದ ಅನಿಲ್ ಕುಂಬ್ಳೆ!

ಕಾರ್ಕಳ, ಧರ್ಮಸ್ಥಳ, ಉಡುಪಿ, ಮಾಣಿ, ಪುತ್ತೂರು, ಕುಂದಾಪುರ, ಕೋಟ, ಕುಮಟಾ, ಕ್ಯಾಸಲ್​ರಾಕ್, ಔರಾದ್, ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ, ಮಂಕಿ, ಗೋಕರ್ಣ, ಫರ್ಹತಾಬಾದ್, ಲಿಂಗನಮಕ್ಕಿ, ತಾಳಗುಪ್ಪ, ಶೃಂಗೇರಿ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಚಿತ್ತಾಪುರ, ಅಡಕಿ, ತ್ಯಾಗರ್ತಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ, ಮಡಿಕೇರಿ, ಗೋಣಿಕೊಪ್ಪಲು ಕೆವಿಕೆಯಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಂಗಳೂರು : ಪ್ರತಿಷ್ಠಿತ ಹೋಟೆಲ್ ನ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ!

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಸೆಯ ಪೆಟ್ಟಿಗೆ ಭರ್ಜರಿ ಹುಲಿ ಕುಣಿತ ಮಾಡಿದ ಶಿಕ್ಷಕರು ಹಾಗೂ ಮಕ್ಕಳು!

Share News

Leave a Reply

Your email address will not be published. Required fields are marked *