Breaking News

ಕಾಲೇಜು ವಿದ್ಯಾರ್ಥಿಗಳೇ ಟಾರ್ಗೆಟ್ ; ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್..!

Share News

ಕೋಲಾರ, ನವೆಂಬರ್ 29: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..!

ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಮೆಡಿಕಲ್ ಕಾಲೇಜ್ ಸೇರಿದಂತೆ ಇತರ ಕಾಲೇಜ್ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಕಾಳಹಸ್ತಿಪುರದ ಗೋಲ್ಡನ್ ಸಿಟಿ ಲೇಔಟ್‍ನಲ್ಲಿ ಆರೋಪಿ ಮನೆ ಮಾಡಿಕೊಂಡಿದ್ದ. ಬಂಧಿತನಿಂದ ಸುಮಾರು 70 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *