Breaking News

ವಿದ್ಯುತ್ ಕಂಬಕ್ಕೆ ರಿಕ್ಷಾ ಡಿಕ್ಕಿ ; ನಿಶ್ಚಿತಾರ್ಥವಾಗಿದ್ದ ಯುವತಿ ಮೃತ್ಯು – ಹಲವರಿಗೆ ಗಾಯ

Share News

ಮಂಗಳೂರು: ಗುರುಪುರದ ಬಂಗ್ಲೆಗುಡ್ಡೆಯಿಂದ ಗುರುಪುರ ಪೇಟೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸೆ.17ರಂದು ನಡೆದಿದೆ.

Mohammed Siraj: ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು- ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ಅದ್ಯ ಬಾಡಿ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಗುರುಪುರ ಬುಗ್ಗೆಗುಡ್ಡೆ ಇಳಿಜಾರು ರಸ್ತೆಯ ಅಣೆಬಳಿಯ ತಿರುವಿನಲ್ಲಿ ಆಟೋ ರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಚಾಲಕ ಸಹಿತ 5 ಮಂದಿ ಗಾಯಗೊಂಡಿದ್ದಾರೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಪ್ರಸ್ತುತ ಮೀನಾಕ್ಷಿ ಅವರ ಸ್ಥಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನೆಲ್ಲಿಕಾಯಿಯಲ್ಲಿ ಇರುವ ಔಷಧೀಯ ಗುಣಗಳು ಯಾವುವು..!

ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಮೃತ ಯುವತಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮುಂದಿನ ವರ್ಷ ಜ.4ರಂದು ಮದುವೆಗೆ ದಿನ ನಿಗದಿಯಾಗಿತ್ತು.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಸೈನಿಕರಿಗೆ ಫ್ರೀಯಾಗಿ ಚಹಾ ನೀಡುವ ಅಂಗಡಿಯ ವಿಡಿಯೋ!


Share News

Leave a Reply

Your email address will not be published. Required fields are marked *