Breaking News

ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ!

Share News

ಮೈಸೂರು: ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪಿರಿಯಾಪಟ್ಟಣ ಸಮೀಪದ ಮಾಕೋಡು ಗ್ರಾಮದ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಆತನ ಪತ್ನಿ ಲಕ್ಷ್ಮಿಗೆ ಮೂವರು ಮಕ್ಕಳಿದ್ದಾರೆ. ಮೊದಲ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಮೂರನೇ ಮಗುವಿನ ಹೆರಿಗೆಯ ಸಮಯದಲ್ಲಿ ಲಕ್ಷ್ಮಿ ನಿಧನರಾಗಿದ್ದರು.

ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್!

ಗಣೇಶ್ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ತಾಯಿ ಅಂಜನಮ್ಮ ಬಳಿ ಬಿಟ್ಟು ಮಗನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ. ನಂತರ, ಆತ ಹಳ್ಳಿಗೆ ಮರಳಿದ್ದ ಮತ್ತು ಅವರು ತಾಯಿಯೊಂದಿಗೆ ವಾಸಿಸುತ್ತಿದ್ದರು. ನಾಲ್ಕು ದಿನಗಳ ಹಿಂದೆ ತಾಯಿಯೊಂದಿಗೆ ಜಗಳವಾಡಿ ಒಂದೂವರೆ ವರ್ಷದ ಮಗನನ್ನು ಮನೆಯಿಂದ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೇಡಿಹಿಲ್ ಬಳಿ ಭೀಕರ ಹಿಟ್ ಆ್ಯಂಡ್ ರನ್ ಕೇಸ್ ಗೆ ಯುವತಿ ಮೃತ್ಯು ; ನಾಲ್ವರು ಗಂಭೀರ!

ಬಳಿಕ ಮಗುವನ್ನು ಕೆರೆಗೆ ಎಸೆದು ನಾಪತ್ತೆಯಾಗಿದ್ದ. ಗ್ರಾಮಸ್ಥರು ಕೆರೆಯಲ್ಲಿ ಮಗುವಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬೆಳವಣಿಗೆ ಬಗ್ಗೆ ತಿಳಿದ ನಂತರ, ಆರೋಪಿಯ ಅತ್ತೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನೇ ಮಗುವನ್ನು ಕೊಂದಿರಬಹುದು ಎಂದು ಶಂಕಿಸಿದ್ದಾರೆ. ಬುಧವಾರ ಪೊಲೀಸರು ಗಣೇಶ್‌ನನ್ನು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗದ ಕಾರಣ ಕೆರೆಗೆ ಎಸೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

WATCH VIDEO ON YOUTUBE: ಸರ್ವರ ಗಮನ ಸೆಳೆದ ತಾಜ್ಮಹಲ್ ಟೀಯ ಸಂಗೀತದ ಬಿಲ್ ಬೋರ್ಡ್!


Share News

Leave a Reply

Your email address will not be published. Required fields are marked *