Breaking News

ಭಾರತ – ಶ್ರೀಲಂಕಾ ನಡುವೆ ಫೈನಲ್ ; ಇಂದು ಪಂದ್ಯ ನಡೆಯುವ ನಿರೀಕ್ಷೆ!

Share News

ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಭಾರತ ಮಹಿಳಾ ಕ್ರಿಕೆಟ್ ತಂಡ (India women’s cricket team) ಫೈನಲ್ ಆಡುವುದು ಕನ್ಫರ್ಮ್ ಆಗಿದ್ದು, ಇದೀಗ ಚಿನ್ನದ ಪದಕದ ಪಂದ್ಯದಲ್ಲಿ ಯಾವ ತಂಡವನ್ನು ಎದುರಿಸಲಿದೆ ಎಂಬುದು ಕೂಡ ನಿರ್ಧರವಾಗಿದೆ. ಮಹಿಳಾ ಕ್ರಿಕೆಟ್‌ನ ಎರಡನೇ ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು (Sri lanka vs Pakistan) ಸೋಲಿಸಿ ಫೈನಲ್‌ಗೆ ಟಿಕೆಟ್ ಖಚಿತ ಪಡಿಸಿಕೊಂಡಿದೆ. ಇದೀಗ ಸೋಮವಾರ ಭಾರತ ಮತ್ತು ಶ್ರೀಲಂಕಾ ನಡುವೆ ಚಿನ್ನದ ಪದಕದ ಪಂದ್ಯ ನಡೆಯಲಿದೆ.ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡ ಕೇವಲ 75 ರನ್ ಗಳಿಸಲಷ್ಟೇ ಶಕ್ತವಾಗಿದ್ದು, ಶ್ರೀಲಂಕಾ ಈ ಗುರಿಯನ್ನು ಸುಲಭವಾಗಿ ಸಾಧಿಸಿತು. ಈ 20 ಓವರ್‌ಗಳ ಪಂದ್ಯದಲ್ಲಿ ಶ್ರೀಲಂಕಾ 6 ವಿಕೆಟ್‌ಗಳಿಂದ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿತು.

75 ರನ್​ಗಳಿಗೆ ಕುಸಿದ ಪಾಕಿಸ್ತಾನ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ ಕೇವಲ 75 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಶಾವಲ್ ಜುಲ್ಫಿಕರ್ ಗರಿಷ್ಠ 16 ರನ್ ಗಳಿಸಿದರೆ, ಕೇವಲ 3 ಆಟಗಾರ್ತಿಯರು ಮಾತ್ರ ಎರಡಂಕಿ ದಾಟಿದರು. ಇನ್ನು ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 17ನೇ ಓವರ್​ನಲ್ಲಿಯೇ ಗುರಿ ತಲುಪಿ ಪದಕ ಭದ್ರಪಡಿಸಿಕೊಂಡಿತು.

ಪದಕ ಖಚಿತ

ಇದೀಗ ಸೋಮವಾರ ಚಿನ್ನದ ಪದಕ ಹಾಗೂ ಕಂಚಿನ ಪದಕದ ಪಂದ್ಯಗಳು ನಡೆಯಲಿವೆ. ಚಿನ್ನದ ಪದಕದ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದ್ದು, ಕಂಚಿನ ಪದಕಕ್ಕಾಗಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳು ಸೆಣಸಲಿವೆ. ಅಂದರೆ ಏಷ್ಯನ್ ಗೇಮ್ಸ್​ನಲ್ಲಿ ಕ್ರಿಕೆಟ್​ನಿಂದ ಭಾರತಕ್ಕೆ ಪದಕ ಖಚಿತವಾಗಿದ್ದು, ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಸೋಲಿಸಿ ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಇದೆ.

ಫೈನಲ್ ಪಂದ್ಯದ ವಿವರ ಹೀಗಿದೆ

ಏಷ್ಯನ್ ಗೇಮ್ಸ್ 2022 ರ ಮಹಿಳಾ ಕ್ರಿಕೆಟ್ ಇವೆಂಟ್‌ನಲ್ಲಿ ಭಾರತ ಒಂದು ಪಂದ್ಯವನ್ನು ಗೆದ್ದು ಫೈನಲ್‌ಗೆ ನೇರ ಸ್ಥಾನವನ್ನು ಪಡೆದುಕೊಂಡಿದೆ. ಟೀಂ ಇಂಡಿಯಾ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಎದುರಿಸಿತ್ತು. ಆದರೆ ಮಳೆಯಿಂದಾಗಿ ಆ ಪಂದ್ಯ ನಡೆಯಲಿಲ್ಲ. ಹೀಗಾಗಿ ಭಾರತ ಸೆಮಿಫೈನಲ್‌ ಪ್ರವೇಶಿಸಿತ್ತು. ಇಲ್ಲಿ ಬಾಂಗ್ಲಾದೇಶ ತಂಡವನ್ನು ಬಹಳ ಸುಲಭವಾಗಿ ಸೋಲಿಸಿದ ಭಾರತ ಇದೀಗ ಫೈನಲ್​ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ ಬೆಳಗ್ಗೆ 11.30ಕ್ಕೆ ಆರಂಭವಾಗಲಿದೆ.


Share News

Leave a Reply

Your email address will not be published. Required fields are marked *