Breaking News

ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮ..!

Share News

ಮೈಸೂರು: ಸೌಥ್‌ ಇಂಡಿಯನ್‌ (SIPM) ಪೇಪರ್‌ ಮಿಲ್‌ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ.

ಇದನ್ನೂ ಓದಿ: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..!

ಬೆಳಗಿನ ಜಾವ ಪೇಪರ್ ಮಿಲ್‌ನ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಪುತ್ತೂರು : ಅರುಣ್ ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ಬಂದ ಐದು ಮಂದಿ ಯುವಕರ ತಂಡ…!

ವಿಷಯ ತಿಳಿಯುತ್ತಿದ್ದಂತೆ 6 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ನಂಜನಗೂಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.

WATCH VIDEO ON YOUTUBE: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಮಹಿಷಾ ಮರ್ದಿನಿ ನೃತ್ಯ ರೂಪಕ


Share News

Leave a Reply

Your email address will not be published. Required fields are marked *