Breaking News

ಜನವರಿ 14ರಿಂದ ಮತ್ತೆ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ!

Share News

ಮಂಗಳೂರು, ಜ 09 : ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನವು ಇಲ್ಲಿಯವರೆಗೆ ಕಾಲಮಿತಿ ಪದ್ಧತಿಯಲ್ಲಿ ನಡೆಯುತ್ತಿದ್ದು, ಆರೂ ಮೇಳಗಳ ಯಕ್ಷಗಾನ ಜ. 14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ ಎಂದು ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವು

ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ.

ಇದನ್ನೂ ಓದಿ: ಬೈಕಿಗೆ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿ

ಇನ್ನು ಉಚ್ಚ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ. 14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್‌ ಕುಮಾರ್‌ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *