Breaking News

ಗಣೇಶ ಚತುರ್ಥಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ.!

Share News

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ.

ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..!

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ!

ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸೆ.19 ಮಂಗಳವಾರದಂದು ಸರ್ಕಾರಿ ರಜೆ ಇರಲಿದೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಸೈನಿಕರಿಗೆ ಫ್ರೀಯಾಗಿ ಚಹಾ ನೀಡುವ ಅಂಗಡಿಯ ವಿಡಿಯೋ!


Share News

Leave a Reply

Your email address will not be published. Required fields are marked *