Breaking News

ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿ ; ಐವರು ಯೋಧರು ಹುತಾತ್ಮ, ಮೂವರಿಗೆ ಗಾಯ..!

Share News

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ..!

ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ಆರಂಭವಾಗಿದೆ.

ಇದನ್ನೂ ಓದಿ: ಹಿರಿಯ ನಟಿ ತಾರಾ ಫೇಸ್‍ಬುಕ್ ಅಕೌಂಟ್ ಹ್ಯಾಕ್…!

ಬುಧವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಗಳು ಈ ಭಾಗದಲ್ಲಿ ನಡೆಯುತ್ತಿದೆ.

ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *