Breaking News

ಪಶು ಆಹಾರದ ಕಚ್ಚಾ ವಸ್ತುಗಳ ಬೆಲೆ ಏರಿಕೆ ತಡೆಯುವಂತೆ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಹರೀಶ್ ಕುಮಾರ್

Share News

ಮಂಗಳೂರು: ಪುಶು ಆಹಾರದ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಇವತ್ತು ರೈತರ ಹಾಗೂ ಇತರ ವರ್ಗದ ಜನರು ತೊಂದರೆಗೆ ಒಳಗಾಗಿದ್ದಾರೆ . ಇದರಿಂದ ಹಾಲು ಹಾಗೂ ಇತರ ಉತ್ಪನ್ನಗಳ ಬೆಲೆ ಏರಿಕೆ ಆಗುತ್ತದೆ ಎಂಬ ಗಂಭೀರ ವಿಷಯವನ್ನು ನಿನ್ನೆ ನಡೆದ ಪರಿಷತ್ತಿನ ಸದನದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪ್ರಸ್ತಾಪಿಸಿದರು.

ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ

ಕರಾವಳಿ ಜಿಲ್ಲೆಗಳು ಇತರ ಜಿಲ್ಲೆಗಳಿಗಿಂತ ಹೆಚ್ಚಿನ ಪಶು ಆಹಾರಗಳನ್ನು ಉಪಯೋಗಿಸುತ್ತಿರುವ ಕಾರಣದಿಂದಾಗಿ ಉಭಯ ಜಿಲ್ಲೆಗಳಲ್ಲಿ ಬಹಳಷ್ಟು ಸಮಸ್ಯೆ ಉಂಟಾಗುತ್ತಿದೆ ಈ ಬಗ್ಗೆ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

ಪಶು ಆಹಾರ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ಪಶು ಆಹಾರ ಉತ್ಪನ್ನಗಳ ಬೆಲೆಯನ್ನು ಕಡಿಮೆಗೊಳಿಸಿದರೆ ಹಾಲಿನ ಉತ್ಪನ್ನಗಳ ಬೆಲೆ ಕಡಿಮೆಗೊಳಿಸಬಹುದು ಎಂದು ಅವರು ಸಲಹೆ ನೀಡಿದರು.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *