Breaking News

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Share News

ಉಡುಪಿ,26: ಬೈಕೊಂದು ಅಫಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯ ಬಳಿ ಗುರುವಾರ ನಡೆದಿದೆ. ಮೃತ ಬೈಕ್ ಸವಾರನನ್ನು ದರ್ಶನ್ (24 ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ

ಮೂಲತಃ ಕಾರವಾರದವರಾದ ದರ್ಶನ್ ಅವರು ಕಟಪಾಡಿ ಸಮೀಪದ ಶಂಕರಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು ಎನ್ನಲಾಗಿದೆ. ಕೆಲವೇ ದಿನಗಳ ಹಿಂದೆ ಇದೇ ಯುವಕ ಬೈಕ್ ಅಫಘಾತದಲ್ಲಿ ಕೈ ಮೂಳೆ ಮುರಿತಕ್ಕೆ ಒಳಗಾಗಿ ಮನೆಯಲ್ಲಿದ್ದರು ಅನ್ನುವ ಮಾಹಿತಿ ಇದೆ.

ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಇನ್ನು ಯಾವುದೋ ಅಪರಿಚಿತ ವಾಹನ ಈತನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡಿದ್ದರಿಂದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


Share News

Leave a Reply

Your email address will not be published. Required fields are marked *