Breaking News

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧನ..!

Share News

ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ. ತನ್ನ ಪತ್ನಿಯನ್ನು ವಿಧವೆಯಂತೆ ಬಿಂಬಿಸಿದ ಪತಿಯೊಬ್ಬ ಆಕೆಯನ್ನು ಕೈಗಾರಿಕೋದ್ಯಮಿಯೊಂದಿಗೆ ಕಳುಹಿಸಿ ಆತನನ್ನು ಬಲೆಗೆ ಬೀಳಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬಂಧಿತ ವ್ಯಕ್ತಿಗಳನ್ನು ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ. ಖಲೀಮ್ ಮತ್ತು ಸಭಾ ವಿವಾಹಿತ ದಂಪತಿ ಕೈಗಾರಿಕೋದ್ಯಮಿ ಅತಿಯುಲ್ಲಾ ಅವರನ್ನು ಬಲೆಗೆ ಬೀಳಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಹನಿಟ್ರ್ಯಾಪ್ ಮಾಡಿ ಹಣ ಪೀಕಲು ಯತ್ನಿಸಿದ್ದು, ಆರೋಪಿ ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಅತೀವುಲ್ಲಾ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ್ದಾನೆ.

ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಅತೀವುಲ್ಲಾಗೆ ಪರಿಚಯಿಸಿ ಅವಳನ್ನು ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾನೆ. ಶೀಘ್ರದಲ್ಲೇ, ಅತೀವುಲ್ಲಾ ಮತ್ತು ಸಭಾ ದೈಹಿಕ ಸಂಬಂಧ ಬೆಳೆಸಿಕೊಂಡರು. ಆರ್‌ಆರ್ ನಗರ ಪ್ರದೇಶದಲ್ಲಿ ಹೋಟೆಲ್ ರೂಂ ಬುಕ್ ಮಾಡಲು ಆಧಾರ್ ಕಾರ್ಡ್‌ನೊಂದಿಗೆ ತನ್ನೊಂದಿಗೆ ಬರುವಂತೆ ಹೇಳಿದ್ದಾಳೆ. ಅತಿವುಲ್ಲಾ ಹೋಟೆಲ್ ಕೋಣೆಗೆ ಪ್ರವೇಶಿಸಿದಾಗ, ಆರೋಪಿಗಳು ಒಳನುಗ್ಗಿ ಈ ಸಂಬಂಧವನ್ನು ಕುಟುಂಬದಿಂದ ಗೌಪ್ಯವಾಗಿಡಲು 6 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *