Breaking News

ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ!

Share News

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್​ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರಲೇಔಟ್ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಇವರಿಬ್ಬರನ್ನು ನಯನಾ ಮತ್ತು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ನಯನಾ ಸಂತ್ರಸ್ತ ಯುವತಿಯ ಸಂಬಂಧಿಯಾಗಿದ್ದಳು. ಆರೋಪಿಗಳು ಕೆಂಗೇರಿ ಮುಖ್ಯರಸ್ತೆಯ ಕೆಂಚನಾಪುರದಲ್ಲಿ ಹೋಟೆಲ್ ನಡೆಸುತ್ತಿದ್ದರು.

ಆನ್​​ಲೈನ್​ ಲೋನ್​ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು!

ಪೊಲೀಸರ ಪ್ರಕಾರ, ಎಂಬಿಎ ಪದವೀಧರಳಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಹೋಟೆಲ್‌ಗೆ ಆಗಾಗ್ಗೆ ಬರುತ್ತಿದ್ದಳು.  ಈ ವೇಳೆ ಆರೋಪಿಗಳು ಜೋಡಿಯನ್ನು ಹೋಟೆಲ್ ಕೊಠಡಿಯಲ್ಲಿ ಒಂದಿಷ್ಟು ಸಮಯ ಕಳೆಯುವಂತೆ ಪ್ರೋತ್ಸಾಹಿಸುತ್ತಿದ್ದರು. ರೂಮಿನಲ್ಲಿ ರಹಸ್ಯವಾಗಿ ಕ್ಯಾಮೆರಾ ಇಟ್ಟು, ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಹೈ ಪ್ರೊಫೈಲ್‌ ಹನಿಟ್ರ್ಯಾಪ್‌ ಕೇಸ್ ನ ಕಿಂಗ್ ಪಿನ್ ಆರತಿ ದಯಾಳ್‌ ಬೆಂಗಳೂರಿನಲ್ಲಿ ಅರೆಸ್ಟ್‌!

ಅದನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಯುವತಿಗೆ ಕಿರಣ್ ವಾಟ್ಸ್ಆ್ಯಪ್ ಮಾಡಿದ್ದ. ನಂತರ ಫೋಟೊ, ವಿಡಿಯೋ ತಕ್ಷಣ ಡಿಲೀಟ್ ಮಾಡಿದ್ದ. ನಂತರ ಕರೆ ಮಾಡಿ ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ, ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುವುದಾಗಿ ನಯನಾ ಮತ್ತು ಕಿರಣ್‌ ಬ್ಲ್ಯಾಕ್‌ಮೇಲ್‌ ಮಾಡಿದ್ದರು. ಯುವತಿ ಈ ಕುರಿತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿ ನಯನ ಹಾಗೂ ಕಿರಣ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *