Breaking News

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ವಜಾಗೊಳಿಸಿರುವ ಪತ್ರ ವೈರಲ್! ಪತ್ರದ ಅಸಲಿಯತ್ತೇನು?

Share News

ಬೆಂಗಳೂರು: ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೀಗೊಂದು ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಪತ್ರ ನಕಲಿ ಎಂದು ತಿಳಿದು ಬಂದಿದೆ. ಈ ನಕಲಿ ಪತ್ರ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡರ ಲೆಟರ್ ಹೆಡ್ ನಲ್ಲಿದೆ. ಎಲ್ಲಾ ಮಾಧ್ಯಮದವರ ಗಮನಕ್ಕೆ, ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಸಿ ಎಂ ಇಬ್ರಾಹಿಂ ಅವರನ್ನು ವಜಾಗೊಳಿಸಲಾಗಿದೆ ಎಂದು ಬರೆಯಲಾಗಿದೆ. ಅದರಲ್ಲಿ ದೇವೇಗೌಡರ ಸಹಿಯಂತೆ ನಕಲಿ ಮಾಡಲಾಗಿದೆ.

ಇದನ್ನೂ ಓದಿ: ಲಿಂಕ್ಡ್​ಇನ್​ನಲ್ಲಿ ಲೇ ಆಫ್; 668 ಉದ್ಯೋಗಿಗಳು ಕೆಲಸದಿಂದ ವಜಾ ಸಾಧ್ಯತೆ!

ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೀ ಐಟಿ ಬೆನ್ನಲ್ಲೇ ಇಡಿ ಭರ್ಜರಿ ದಾಳಿ!

ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

WATCH VIDEO ON YOUTUBE: ಸರ್ವರ ಗಮನ ಸೆಳೆದ ತಾಜ್ಮಹಲ್ ಟೀಯ ಸಂಗೀತದ ಬಿಲ್ ಬೋರ್ಡ್!


Share News

Leave a Reply

Your email address will not be published. Required fields are marked *