Breaking News

ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಗುರಿಯಾಗಿಸಿ ಇರಾನ್ ಕ್ಷಿಪಣಿ ದಾಳಿ

Share News

ಕರಾಚಿ, ಜ 17 : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯ ಉಗ್ರಗಾಮಿ ಸಂಘಟನೆ ಜೈಶ್ ಅಲ್ ಅದ್ಲ್‌ನ ಎರಡು ಅಡಗುದಾಣ ಗುರಿಯಾಗಿಸಿ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವುದಾಗಿ ವರದಿಯಾಗಿದೆ.

ದಕ್ಷಿಣ ಬಲೂಚಿಸ್ತಾನ್‌ನ ಕೌಹ್-ಸಬ್ಜ್ ಪ್ರದೇಶದ ಸುನ್ನಿ ಉಗ್ರರ 2 ಪ್ರಮುಖ ತಾಣಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ಹೊಡೆದು ನಾಶಪಡಿಸಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ.

ಇದನ್ನೂ ಓದಿ: ಪುಂಜಾಲಕಟ್ಟೆ: ಸರಕಾರಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

ಇನ್ನೊಂದೆಡೆ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ತೀವ್ರ ಖಂಡಿಸಿದ್ದು, ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಘಟನೆಯಿಂದ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಮತ್ತು ಇದು ಸ್ವೀಕಾರಾರ್ಹವಲ್ಲ” ಎಂದು ಇರಾನ್ ಗೆ ಎಚ್ಚರಿಸಿದೆ. ಈ ಹಿಂದೆ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರಾನ್ ಭದ್ರತಾ ಪಡೆಗಳ ಮೇಲೆ ಉಗ್ರಗಾಮಿ ಗುಂಪು ದಾಳಿ ನಡೆಸಿತ್ತು.

ಇದನ್ನೂ ಓದಿ: ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮಹತ್ವದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ

 


Share News

Leave a Reply

Your email address will not be published. Required fields are marked *