Breaking News

ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್

Share News

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್

ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ತಲೆಗೆ ಪೆಟ್ಟು


Share News

Leave a Reply

Your email address will not be published. Required fields are marked *