Breaking News

ಕಾರ್ಕಳ : ಐಟಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!

Share News

ಕಾರ್ಕಳ : ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಬೊಮ್ಮಾಯಿ

ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಬಸ್, ಕಾರು, ಲಾರಿ, ರಿಕ್ಷಾ ಸೇರಿದಂತೆ 9 ವಾಹನಗಳ ನಡುವೆ ಸರಣಿ ಅಪಘಾತ…!

ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

WATCH VIDEO ON YOUTUBE: ಸಾರ್ವಜನಿಕವಾಗಿ ಕಾಣಿಸಿಕೊಂಡ ನಟ ಸಂಜಯ್ ಕಪೂರ್!


Share News

Leave a Reply

Your email address will not be published. Required fields are marked *