Breaking News

ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ; ಬೈಕ್ ಸವಾರ ಸಾವು!

Share News

ಕಾರ್ಕಳ ನವೆಂಬರ್ 27: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.

ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್‌ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್‌ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಇಂದು ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು.ಇನ್ನು ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು. ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಗಿದೆ


Share News

Leave a Reply

Your email address will not be published. Required fields are marked *