Breaking News

ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಅಂಡರ್‌ಗ್ರೌಂಡ್ ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿತ ; ಕಾರ್ಮಿಕ ಸಾವು!

Share News

ಶಿವಮೊಗ್ಗ: ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಅಂಡರ್‌ಗ್ರೌಂಡ್ ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಶಿವಮೊಗ್ಗದ (Shivamogga) ಸವಳಂಗ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ನಿವಾಸಿ ಸತೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ.

ಇದನ್ನೂ ಓದಿ: 60 ಬಾರಿ ವ್ಯಕ್ತಿಗೆ ಚಾಕುವಿನಿಂದ ಇರಿದು ಶವದ ಎದುರೇ ಡಾನ್ಸ್ ಮಾಡಿ ವಿಕೃತಿ ಮೆರೆದ 16 ವರ್ಷದ ಬಾಲಕ..!

ಕಾಮಗಾರಿಯ ಹಿನ್ನೆಲೆಯಲ್ಲಿ ಅಂಡರ್‌ಗ್ರೌಂಡ್ ಪೈಪ್‌ಲೈನ್ ಹಾಕಲು 11 ಅಡಿ ಆಳದಷ್ಟು ಜೆಸಿಬಿಯಿಂದ ಗುಂಡಿ ತೆಗೆಯಲಾಗುತ್ತಿತ್ತು. ಈ ವೇಳೆ ಕಾರ್ಮಿಕ ಸತೀಶ್ ನಾಯ್ಕ ಗುಂಡಿಯೊಳಗೆ ನಿಂತುಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಮಣ್ಣು ಕುಸಿದುಬಿದ್ದ ಪರಿಣಾಮ ಕಾರ್ಮಿಕ ಮಣ್ಣಿನ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ.

ಇದನ್ನೂ ಓದಿ: ಲಿಫ್ಟ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್‌

ಕಾರ್ಮಿಕನನ್ನು ರಕ್ಷಿಸಲು ಜೆಸಿಬಿಯನ್ನು ಬಳಸಲಾಗಿದೆ. ಜೆಸಿಬಿಯ ಬಕೆಟ್ ಕಾರ್ಮಿಕನ ತಲೆಗೆ ತಗುಲಿ, ಆತನ ಮೆದುಳು ತಲೆಯಿಂದ ಹೊರಗೆ ಬಂದಿದೆ. ತಕ್ಷಣ ಗುಂಡಿಯಿಂದ ಮೇಲೆ ಎತ್ತಿದ ಇತರೆ ಕಾರ್ಮಿಕರು ಸ್ಥಳೀಯರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಕಾರ್ಮಿಕ ಮೃತಪಟ್ಟಿದ್ದಾನೆ. ಘಟನೆ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ಹುಟ್ಟಿ ಹರಿಯುವ ಪ್ರದೇಶದಿಂದ ಸಮುದ್ರ ಸೇರುವ ತನಕದ ಕಾವೇರಿ ನದಿಯ ಅದ್ಭುತ ದೃಶ್ಯ!


Share News

Leave a Reply

Your email address will not be published. Required fields are marked *